ಆದಿಕಾಂಡ 30:26

ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 30

24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.

25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.

26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.

27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.

28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.

ಆದಿಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी