ದಾನಿಯೇಲನು 11:23

ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.

22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.

23ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

24ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.

25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी