ಅಪೊಸ್ತಲರ ಕೃತ್ಯಗಳು 22:26

ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 22

24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;

25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

26ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.

27ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.

28ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी