೨ ಸಮುವೇಲನು 11:6

ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 11

4ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.

5ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.

6ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.

7ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.

8ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.

೨ ಸಮುವೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी