ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
10ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ