ಯೆರೆಮಿಯ 35:16

ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ

ಸಂದರ್ಭದೊಂದಿಗೆ ಓದಿ · ಯೆರೆಮಿಯ 35

14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.

15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.

16ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ

17ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

18ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,

ಯೆರೆಮಿಯ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी