ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
37ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
38ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
39ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ