೧ ಸಮುವೇಲನು 11:8

ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 11

6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ

7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.

8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.

9ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.

10ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.

೧ ಸಮುವೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी