ಪ್ರಕಟನೆ 17:3

ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 17

1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.

2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.

3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.

4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು

5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.

ಪ್ರಕಟನೆ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी