೧ ಅರಸುಗಳು 22:30

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.

29ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.

30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.

31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.

32ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी