ಯೆಶಾಯ 53:3

ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 53

1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?

2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.

3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.

5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.

ಯೆಶಾಯ 53 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी