ಅಪೊಸ್ತಲರ ಕೃತ್ಯಗಳು 7:45

ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

43ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.

47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी