ಲೂಕನು 18:30

ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 18

28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ

29ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು

30ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.

31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी