ಅಪೊಸ್ತಲರ ಕೃತ್ಯಗಳು 19:15

ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.

14ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.

15ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.

16ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.

17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी