ವಿಮೋಚನಕಾಂಡ 24:5

ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 24

3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.

4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.

6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.

7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.

ವಿಮೋಚನಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी