೧ ಪೂರ್ವಕಾಲವೃತ್ತಾಂತ 28:19

ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 28

17ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.

18ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.

19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.

20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.

21ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.

೧ ಪೂರ್ವಕಾಲವೃತ್ತಾಂತ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी