ಯೆಹೋಶುವ 6:20

ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.

ಸಂದರ್ಭದೊಂದಿಗೆ ಓದಿ · ಯೆಹೋಶುವ 6

18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.

19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.

20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.

21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.

22ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

ಯೆಹೋಶುವ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी