ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.
13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
14ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
15ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.
16ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ