ಮತ್ತಾಯನು 21:31

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

32ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी