ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
6ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
7ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ