ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
16ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ