೨ ಸಮುವೇಲನು 11:14

ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 11

12ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.

13ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.

14ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.

15ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.

16ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.

೨ ಸಮುವೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी