ಜೆಕರ್ಯ 2:8

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 2

6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.

7ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.

8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.

10ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.

ಜೆಕರ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी