ಯಾಜಕಕಾಂಡ 8:14

ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 8

12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.

13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.

14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.

16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.

ಯಾಜಕಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी