ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
19ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
20ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
21ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
22ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
23ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ