ಯೆಶಾಯ 38:12

ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.

ಸಂದರ್ಭದೊಂದಿಗೆ ಓದಿ · ಯೆಶಾಯ 38

10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.

11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.

12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.

13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.

14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.

ಯೆಶಾಯ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी