೧ ಅರಸುಗಳು 7:33

ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

31ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.

32ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.

33ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು.

34ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.

35ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी