ಆಮೋಸ 8:11

ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಆಮೋಸ 8

9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.

10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.

11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.

13ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.

ಆಮೋಸ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी