ಯೋವೇಲ 2:10

ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.

ಸಂದರ್ಭದೊಂದಿಗೆ ಓದಿ · ಯೋವೇಲ 2

8ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.

9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.

10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.

11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?

12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

ಯೋವೇಲ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी