ಯೋಹಾನನು 5:34

ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 5

32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

33ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.

34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.

35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;

36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी