ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
36ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ