ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
2ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ