ಅಪೊಸ್ತಲರ ಕೃತ್ಯಗಳು 10:5

ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.

4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.

5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.

6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.

7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी