ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
12ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ