ದಾನಿಯೇಲನು 11:20

ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

18ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.

19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.

20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.

22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी