ಯೆಹೋಶುವ 6:7

ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 6

5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.

6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.

7ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.

8ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.

9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.

ಯೆಹೋಶುವ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी