ವಿಮೋಚನಕಾಂಡ 4:17

ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 4

15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.

16ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.

17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.

18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.

19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.

ವಿಮೋಚನಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी