ಯೋವೇಲ 2:25

ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.

ಸಂದರ್ಭದೊಂದಿಗೆ ಓದಿ · ಯೋವೇಲ 2

23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.

24ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.

25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.

26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

ಯೋವೇಲ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी