ಯೆರೆಮಿಯ 32:27

ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

25ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?

26ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?

28ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.

29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी