ಯೋಹಾನನು 19:14

ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 19

12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.

13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.

14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी