ಯೆರೆಮಿಯ 7:25

ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.

24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

25ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.

26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.

27ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी