ಯೆರೆಮಿಯ 27:6

ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 27

4ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--

5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.

6ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.

7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.

8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी