ಅಪೊಸ್ತಲರ ಕೃತ್ಯಗಳು 13:40

ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.

41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी