ಆದಿಕಾಂಡ 44:20

ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 44

18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.

19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು

20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.

21ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,

22ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.

ಆದಿಕಾಂಡ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी