ವಿಮೋಚನಕಾಂಡ 33:11

ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 33

9ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.

10ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.

11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

12ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.

13ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.

ವಿಮೋಚನಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी